ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್‍ಗೆ ಮತನೀಡಿ: ಸಂಸದ ಧ್ರುವನಾರಾಯಣ ಮನವಿ
Update: 2018-06-04 23:08 IST
ಮೈಸೂರು,ಜೂ.4: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಲಕ್ಷ್ಮಣ್ ಅವರಿಗೆ ಮೊದಲ ಪ್ರಾಶಸ್ತ್ಯ ಮತ ನೀಡಿ ಬೆಂಬಲಿಸಬೇಕೆಂದು ಸಂಸದ ಧ್ರುವನಾರಾಯಣ್ ಮನವಿ ಮಾಡಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಕ್ಷ್ಮಣ್ ಶಿಕ್ಷಕರ ಹಾಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಬೆಂಬಲವಾಗಿ ನಿಂತು ಹೋರಾಟ ನಡೆಸಿದ್ದರು, ಕುಮಾರ್ ನಾಯಕ್ ವರದಿ ಜಾರಿ, ತತ್ಸಮಾನ ಹುದ್ದೆಗಳಿಗೆ ಹೆಚ್ಚುವರಿ ವೇತನ, ಬಡ್ತಿ, ಅನುಧಾನಿತ ಶಾಲಾ ಶಿಕ್ಷಕರಿಗೂ ಆರೋಗ್ಯ ಯೋಜನೆ ಜಾರಿಗೊಳಿಸಲು ಶ್ರಮಿಸಿದ್ದರು, ಅಲ್ಲದೇ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಲಕ್ಷ್ಮಣ್ ಅವರನ್ನು ಬೆಂಬಲಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಮತ್ತಷ್ಟು ಬಲಗೊಳಿಸಿ ಎಂದು ಕೋರಿದರು.