ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್‌ ಗೂಂಡೂರಾವ್ ಲಾಬಿ ?

Update: 2018-06-05 15:04 GMT

ಬೆಂಗಳೂರು, ಜೂ.5: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಸಚಿವ ಸ್ಥಾನ ಪಡೆಯುವ ಬದಲು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಶಾಸಕ ದಿನೇಶ್‌ ಗುಂಡೂರಾವ್ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸದ್ಯ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ದಿನೇಶ್‌ ಗುಂಡೂರಾವ್, ಸಚಿವ ಸ್ಥಾನಕ್ಕಿಂತ ಪಕ್ಷ ಸಂಘಟನೆಗಾಗಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡುವಂತೆ ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜೊತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಯುವಕರಿಗೆ ಮಣೆ ಹಾಕಲಾಗಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಪಕ್ಷದ ಸಾರಥ್ಯವನ್ನು ಯುವಕರಿಗೆ ನೀಡಬೇಕು ಎಂದು ದಿನೇಶ್‌ ಗುಂಡೂರಾವ್ ಪರವಾಗಿ ಕೆಲ ಮುಖಂಡರು ರಾಹುಲ್‌ಗಾಂಧಿ ಮೇಲೆ ಒತ್ತಡ ಹೇರಿದ್ದಾರೆ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News