ಚುನಾವಣೆಯಲ್ಲಿ ಬೆಂಬಲಿಸುವಂತೆ ಮನವಿ

Update: 2018-06-05 15:51 GMT

ಬೆಂಗಳೂರು, ಜೂ. 5: ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸಿ.ಅಶ್ವತ್ಥ ನಾರಾಯಣ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತತವಾಗಿ 37 ವರ್ಷಗಳ ಕಾಲ ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮಗನರ ಜಿಲ್ಲೆಗಳಲ್ಲಿ ಪ್ರಾಧ್ಯಾಪಕನಾಗಿ ಯಾವುದೇ ಕಪ್ಪುಚುಕ್ಕೆಯಿಲ್ಲದೆ ಸೇವೆ ಸಲ್ಲಿಸಿದ್ದೇನೆ. ಅಲ್ಲದೆ, ನಿಯೋಜನೆ ಮೇರೆಗೆ 18 ವರ್ಷಗಳ ಕಾಲ ಸಚಿವರುಗಳ ಆಪ್ತ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ ಎಂದು ತಿಳಿಸಿದರು.

ಸರಕಾರಿ ಸೇವೆಯಿಂದ ನಿವೃತ್ತಿಯಾಗಿದ್ದು, ಪ್ರಸಕ್ತ ಜೂ.8 ರಂದು ನಡೆಯಲಿರುವ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಪದವೀಧರರು ಹೆಚ್ಚಿನ ಸಂಖ್ಯೆಯಲ್ಲಿ ನನಗೆ ಮತ ನೀಡಿ, ಬೆಂಬಲಿಸಬೇಕು ಎಂದು ಹೇಳಿದರು.

ಪದವೀಧರರಿಗೆ ಹಾಗೂ ಇತರೆ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಕೈಗಾರಿಕೆ ಮತ್ತು ಮಾಹಿತಿ ತಂತ್ರಜ್ಞಾನ, ಕೃಷಿ, ತೋಟಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಪ್ರಯತ್ನ ಮಾಡಲಾಗುತ್ತದೆ. ಐಟಿ, ಬಿಟಿ ವಲಯ ಹಾಗೂ ಕೈಗಾರಿಕಾ ವಲಯದಲ್ಲಿನ ನೌಕರರ ಕುಂದುಕೊರತೆಗಳನ್ನು ಹೋಗಲಾಡಿಸಲಾಗುತ್ತದೆ. ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜು, ಉಪನ್ಯಾಸಕರು ಮತ್ತು ಪ್ರಾಂಶುಪಾಲರ ವೇತನ ತಾರತಮ್ಯ ನಿವಾರಣೆ ಮಾಡಲಾಗುತ್ತದೆ ಸೇರಿದಂತೆ ವಿವಿಧ ಭರವಸೆಗಳನ್ನು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News