ಕಾಂಗ್ರೆಸ್‌ನಲ್ಲಿ ಸಂಪುಟ ರಚನೆಗೆ ಕಸರತ್ತು ಮುಂದುವರಿಕೆ

Update: 2018-06-05 15:53 GMT

ಬೆಂಗಳೂರು, ಜೂ.5: ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಯಾರನ್ನೆಲ್ಲಾ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂಬುದು ಪಕ್ಷದ ವರಿಷ್ಠರಿಗೆ ತಲೆ ನೋವಾಗಿ ಪರಿಣಮಿಸಿದೆ. ಜಾತಿ, ಪ್ರದೇಶ, ಹಿರಿತನ, ಅನುಭವದ ಆಧಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ.

ವಿದೇಶ ಪ್ರವಾಸದಿಂದ ಹಿಂದಿರುಗಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ, ಸಂಪುಟಕ್ಕೆ ಯಾರನ್ನು ಸೇರ್ಪಡೆ ಮಾಡಬೇಕು ಎಂಬುದರ ಕುರಿತು ನಾಯಕರೊಂದಿಗೆ ಸುದೀರ್ಘ ಸಭೆ ನಡೆಸಿದರು. ಇದಕ್ಕೂ ಮುನ್ನ ಮುಖಂಡರೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿ, ಮಾಹಿತಿಯನ್ನು ಕಲೆ ಹಾಕಿದರು.

ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ಗುಂಡೂರಾವ್, ಸಂಸದ ಕೆ.ಎಚ್.ಮುನಿಯಪ್ಪ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News