×
Ad

ಕೊಣಾಜೆ: ಮೀನುಗಾರರ ಪ್ರಾಥಮಿಕ ಸಂಘದಿಂದ ಪುಸ್ತಕ ವಿತರಣೆ

Update: 2018-06-05 23:03 IST

 ಕೊಣಾಜೆ, ಜೂ. 5: ಸಮಾಜದಲ್ಲಿ ಹಿಂದುಳಿದ ಮಕ್ಕಳಿಗೂ ಶಿಕ್ಷಣ ದೊರಕುವ ನಿಟ್ಟಿನಲ್ಲಿ ಪ್ರೋತ್ಸಾಹಿಸಿದಾಗ ಕುಟುಂಬ ಸಬಲೀಕರಣವಾಗಲಿದೆ, ಈ ಹಿನ್ನೆಲೆಯಲ್ಲಿ ಸಂಘದ ಗ್ರಾಮೀಣ ಭಾಗದಲ್ಲೂ ಅರ್ಹರನ್ನು ಉಚಿತ ಪುಸ್ತಕ ವಿತರಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಮೂಡಾದ ಮಾಜಿ ಅಧ್ಯಕ್ಷ ಇಬ್ರಾಹಿಮ್ ಕೋಡಿಜಾಲ್ ಅಭಿಪ್ರಾಯಪಟ್ಟರು.

ಮಂಗಳೂರು ಉತ್ತರ ಧಕ್ಕೆ ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ ಕೊಣಾಜೆ ಅಡ್ಕರೆ ಪಡ್ಪು ಗ್ರೀನ್‌ವೀವ್ ಅನುದಾನಿತ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಮಹಿಳಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ದ.ಕ. ಮತ್ತು ಉಡುಪಿ ಜಿಲ್ಲೆ ಜಮೀಯತುಲ್ ಫಲಾಹ್ ಅಧ್ಯಕ್ಷ ಶಾಹುಲ್ ಹಮೀದ್, ಮಂಗಳೂರು ಉತ್ತರ ಧಕ್ಕೆ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಜೆ.ಮುಹಮ್ಮದ್ ಇಸಾಕ್, ನಿರ್ದೇಶಕರಾದ ಯು.ಟಿ.ಅಹ್ಮದ್ ಶರೀಫ್, ಇಬ್ರಾಹಿಂ ಕೆ.ಎಮ್.ಎಚ್, ಅಶ್ರಫ್ ಪದಿಂಜಾರ್, ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೌಕತ್ ಆಲಿ, ಅಸೈಗೋಳಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಪುಲ್ಲು, ಅಡ್ಕರೆಪಡ್ಪು ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಆದಂ ಉಸ್ತಾದ್, ಉದ್ಯಮಿ ದೇವಣ್ಣ ಶೆಟ್ಟಿ, ಕೊಣಾಜೆ ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ಖಾದರ್, ಮುಹಮ್ಮದ್ ಅಡ್ಕರೆಪಡ್ಪು, ಇಸ್ಮಾಯಿಲ್, ಹಸೈನಾರ್, ಸಿನಾನ್ , ಗ್ರೀನ್ ವೀವ್ ಅನುದಾನಿತ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಆಗ್ನೆಸ್ ಡಿಸೋಜ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎವಲೀನ್ ಪಿ.ಐಮನ್ ಮೊದಲಾದವರು ಉಪಸ್ಥಿತರಿದ್ದರು.

ಗ್ರೀನ್‌ವಿವ್ ಕಾಲೇಜಿನ ಪ್ರಾಂಶುಪಾಲ ಅಬೂಬಕರ್ ಕೆ.ಸ್ವಾಗತಿಸಿದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮುಹಮ್ಮದ್ ಮುಸ್ತಫಾ ಮಲಾರ್ ಪ್ರಾಸ್ತವಿಕವಾಗಿ ಮಾತನಾಡಿದರು. ರೆನಿಟಾ ಡಿಕುನ್ನಾ ಹಾಗೂ ನಮಿತಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News