ಜೂ.7ರಂದು ಎಸ್.ಕೆ.ಕಾಂತಾಗೆ ಒಡೆಯರ್ ಪ್ರಶಸ್ತಿ

Update: 2018-06-06 13:11 GMT

ಬೆಂಗಳೂರು, ಜೂ.6: ಕನ್ನಡ ಸಾಹಿತ್ಯ ಪರಿಷತ್ ನೀಡುವ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಮಾಜಿ ಸಚಿವ ಮತ್ತು ಹೋರಾಟಗಾರ ಎಸ್.ಕೆ.ಕಾಂತಾಗೆ ನೀಡಲಾಗುತ್ತಿದೆ.

ಜೂ.7ರಂದು ಸಂಜೆ 5.30ಕ್ಕೆ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ವೇಳೆ ಕಸಾಪ ಅಧ್ಯಕ್ಷ ಮನು ಬಳಿಗಾರ್ ಸೇರಿದಂತೆ ಹಲವು ಸಾಹಿತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News