ಪದವೀಧರ ಹಿರಿಯ ನಾಗರಿಕರ ಆರೋಗ್ಯಕ್ಕೆ ವಿಶೇಷ ಆದ್ಯತೆ: ಪಕ್ಷೇತರ ಅಭ್ಯರ್ಥಿ ಕೆ.ರಾಮಕೃಷ್ಣ

Update: 2018-06-06 14:23 GMT

ಬೆಂಗಳೂರು, ಜೂ.6: ರಾಜ್ಯದ ಪದವೀಧರ ಹಿರಿಯ ನಾಗರಿಕರ ಆರೋಗ್ಯಕ್ಕೆ ವಿಶೇಷ ಕಾರ್ಯಕ್ರಮವನ್ನು ರೂಪಿಸುವ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ಬೆಂಗಳೂರು ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ರಾವುಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.

ಬುಧವಾರ ನಗರದ ವಿವಿಧೆಡೆ ಬಿರುಸಿನ ಪ್ರಚಾರ ಕೈಗೊಂಡ ಅವರು, ಹಿರಿಯ ನಾಗರಿಕರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಅಗತ್ಯ. ಈ ಹಿನ್ನೆಲೆಯಲ್ಲಿ ಪದವೀಧರ ಹಿರಿಯ ನಾಗರಿಕರ ಆರೋಗ್ಯಕ್ಕೆ ವಿಶೇಷ ಕಾರ್ಯಕ್ರಮವನ್ನು ರೂಪಿಸುವುದಾಗಿ ಭರವಸೆಯನ್ನು ನೀಡಿದರು.

ಈ ಬಾರಿ ಚುನಾವಣೆಯಲ್ಲಿ ವಿಧಾನಪರಿಷತ್ತಿಗೆ ಆಯ್ಕೆಯಾದಲ್ಲಿ ನನ್ನ ಆರು ವರ್ಷದ ವೇತನವನ್ನು ರಾಜ್ಯದಲ್ಲಿ ಪದವೀಧರರ ಭವನ ನಿರ್ಮಿಸಲು ನೀಡುತ್ತೇನೆ. ಪದವೀಧರ ನಿರುದ್ಯೋಗಿಗಳಿಗೆ ಅವರ ವಿದ್ಯಾರ್ಹತೆಗೆ ಸರಿಯಾದ ಕೆಲಸ ದೊರಕಿಸಿಕೊಡುವಲ್ಲಿ ವಿಶೇಷ ಆಸಕ್ತಿ ವಹಿಸುತ್ತೇನೆ. ಪದವೀಧರರಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಹಿರಿಯರ ಆರೋಗ್ಯ ರಕ್ಷಣೆಗೆ ವಿಶೇಷ ಸೌಲಭ್ಯ ಒದಗಿಸುತ್ತೇನೆ ಎಂದು ಅವರು ಭರವಸೆ ನೀಡಿದರು.

ಪದವೀಧರರ ಕಲ್ಯಾಣಕ್ಕೆ ಮೀಸಲಾದ ಅನುದಾನ ಮತ್ತು ಕಾರ್ಯಕ್ರಮ ಸದ್ಬಳಕೆ ಆಗುವಂತೆ ಸೂಕ್ತ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು. ಆರು ತಿಂಗಳಿಗೊಮ್ಮೆ ಜಿಲ್ಲಾ ಮತ್ತು ತಾಲೂಕುಗಳಿಗೆ ಭೇಟಿ ನೀಡುವ ಮೂಲಕ ಪದವೀಧರರ ಸಮಸ್ಯೆಗಳನ್ನು ವಿಚಾರಿಸಿ ಸರಿಯಾದ ಪರಿಹಾರ ಒದಗಿಸಿ ಕೊಡುವಲ್ಲಿ ಪ್ರಯತ್ನಿಸಲಾಗುವುದು. ಸರಕಾರದ ಮಟ್ಟದಲ್ಲಿ ಹೋರಾಟ ಮಾಡಿ ನಿರುದ್ಯೋಗಿಗಳಿಗೆ ಗರಿಷ್ಠ ಮೊತ್ತದ ವೇತನ ಸೌಲಭ್ಯ ಒದಗಿಸುವಲ್ಲಿ ಶ್ರಮಿಸುತ್ತೇನೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News