ಕುಂದಾಪುರ ಪುರಸಭೆ: ವಿಶ್ವ ಪರಿಸರ ದಿನಾಚರಣೆ
Update: 2018-06-06 21:15 IST
ಉಡುಪಿ, ಜೂ.6: ಕುಂದಾಪುರ ಪುರಸಭೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಮುಂದುವರಿದ ಅಂಗವಾಗಿ ಮೀನು ಮಾರ್ಕೆಟ್ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಆಯೋಜಿಸಲಾಯಿತು.
ಪುರಸಬಾ ಅಧ್ಯಕ್ಷ ವಸಂತಿ ಮೋಹನ್ ಸಾರಂಗ, ಉಪಾಧ್ಯಕ್ಷ ರಾಜೇಶ್ ಕಾವೇರಿ, ಪುರಸಭಾ ಮುಖ್ಯಾಧಿಕಾರಿ ವಾಣಿ ವಿ. ಆಳ್ವ, ಪುರಸಭಾ ಸದಸ್ಯರಾದ ಶ್ರೀಧರ್ ಶೇರುಗಾರ್, ದೇವಕಿ ಸಣ್ಣಯ್ಯ, ಪರಿಸರ ಅಭಿಯಂತರ ಮಂಜುನಾಥ ಶೆಟ್ಟಿ, ಹಿರಿಯ ಆರೋಗ್ಯ ನಿರೀಕ್ಷಕ ಶರತ್ ಎಸ್. ಖಾರ್ವಿ, ಕಿರಿಯ ಆರೋಗ್ಯ ನಿರೀಕ್ಷಕ ರಾಘವೇಂದ್ರ ಮಂಜುನಾಥ ನಾಯ್ಕ, ಪೌರಕಾರ್ಮಿಕರು ಮತ್ತು ವಾರ್ಡಿನ ಸಾರ್ವಜನಿಕರು ಭಾಗವಹಿಸಿದ್ದರು.