ಪ್ರಮಾಣ ವಚನ...

Update: 2018-06-06 18:15 GMT

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟಕ್ಕೆ ಎಚ್.ಡಿ. ರೇವಣ್ಣ, ಡಿ.ಕೆ.ಶಿವಕುಮಾರ್, ಯು.ಟಿ.ಖಾದರ್, ಬಂಡೆಪ್ಪ ಕಾಶಂಪೂರ್, ಕೆ.ಜೆ. ಜಾರ್ಜ್, ಝಮೀರ್ ಅಹ್ಮದ್, ಎನ್.ಮಹೇಶ್, ಜಯಮಾಲಾ ಸೇರಿದಂತೆ 25 ಮಂದಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ನೂತನವಾಗಿ ಸೇರ್ಪಡೆಯಾಗಿದ್ದಾರೆ. ಬುಧವಾರ ಮಧ್ಯಾಹ್ನ 2:12ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ನೂತನ ಸಂಪುಟ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನವನ್ನು ಬೋಧನೆ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor