×
Ad

ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನಿರಂತರ ಪ್ರೋತ್ಸಾಹ

Update: 2018-06-07 22:02 IST

ಉಡುಪಿ, ಜೂ.7:ಆರ್ಥಿಕವಾಗಿ ಹಿಂದುಳಿದ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ನೆರವು ಹಾಗೂ ಸೌಲಭ್ಯಗಳನ್ನು ನೀಡುವ ಮೂಲಕ ಅವರ ಶೈಕ್ಷಣಿಕ ಪ್ರಗತಿಗೆ ನಿರಂತರ ಪ್ರೋತ್ಸಾಹ ನೀಡುವುದಾಗಿ ಉಡುಪಿ ಜಿಪಂ ಅದ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಇತ್ತೀಚೆಗೆ ಕನ್ನರ್ಪಾಡಿ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ವಿತರಿಸಿ ಅವರು ಮಾತನಾಡುತಿದ್ದರು. ಪಠ್ಯ ಪುಸ್ತಕ ಪಡೆದ ಮಕ್ಕಳು ಅವುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಫಲಿತಾಂಶ ಪಡೆಯು ವಂತೆ ಹೇಳಿದ ದಿನಕರ ಬಾಬು, ಈ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ಇನ್ನೂ ಹೆಚ್ಚಿನ ನೆರವು ನೀಡುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಕಡೆಕಾರ್ ಪಂಚಾಯತ್ ಮಾಜಿ ಅಧ್ಯಕ್ಷ ಪ್ರದೀಪ್ ಚಂದ್ರ ಗಾಣಿಗ, ತಾಪಂ ಮಾಜಿ ಉಪಾದ್ಯಕ್ಷ ಗಣೇಶ್ ಕುಮಾರ್, ಕಿಶೋರ್ ಕುಮಾರ್, ಸುಧಾಕರ್, ದಿನೇಶ್, ರಿಕೇಶ್ ಪಾಲನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News