ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

Update: 2018-06-07 18:36 GMT

ಮಾನ್ಯರೇ,

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2018’ಕ್ಕಾಗಿ ಕನ್ನಡದ ಕವಿ/ಕವಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ. 10,000/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ.

ವಿ.ಸೂ: ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವುದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು.

ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜುಲೈ 15. ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ; -ಪ್ರಕಾಶ ಸುನಂದಾ ಕಡಮೆ ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2018, ನಂ. 90, ‘ನಾಗಸುಧೆ’ ಮಹಡಿ, 6/ಬಿ ಕ್ರಾಸ್, ಕಾಳಿದಾಸನಗರ, ವಿದ್ಯಾನಗರ ವಿಸ್ತೀರ್ಣ,ಹುಬ್ಬಳ್ಳಿ- 580031 ಮೊ: 9845779387.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News