ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ: ಸತೀಶ್ ಜಾರಕಿಹೊಳಿ
Update: 2018-06-08 18:26 IST
ಬೆಳಗಾವಿ, ಜೂ.8: ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ಶೀಘ್ರವೇ ರಾಜೀನಾಮೆ ನೀಡುವುದಾಗಿ ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಶುಕ್ರವಾರ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಜೂ.11ರಂದು ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
ನನ್ನ ವಿರೋಧಿಗಳು ಬೆಂಗಳೂರು ಹಾಗೂ ದಿಲ್ಲಿಯಲ್ಲಿದ್ದಾರೆ. ನನಗೆ ಸಚಿವ ಸ್ಥಾನವನ್ನು ತಪ್ಪಿಸಿದ್ದು ಯಾರು ಎಂಬುದನ್ನು ಒಂದು ವಾರದಲ್ಲಿ ಬಹಿರಂಗಪಡಿಸುವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.