×
Ad

ಶಿವಮೊಗ್ಗ: ಅಪರಿಚಿತ ವಾಹನ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು

Update: 2018-06-08 22:34 IST

ಶಿವಮೊಗ್ಗ, ಜೂ. 8: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಡೆದಿದೆ. 

ರಾಮಚಂದ್ರರಾವ್ ಮೃತಪಟ್ಟ ಸವಾರ ಎಂದು ಗುರುತಿಸಲಾಗಿದೆ. ಕಡದಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ, ಟಿವಿಎಸ್ ಎಕ್ಸೆಲ್‍ನಲ್ಲಿ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾತದ ನಂತರ ವಾಹನ ಚಾಲಕ, ತನ್ನ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. 

ಗಂಭೀರವಾಗಿ ಗಾಯಗೊಂಡಿದ್ದ ರಾಮಚಂದ್ರ ರಾವ್‍ರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಭದ್ರಾವತಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News