ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಜೂ.12ಕ್ಕೆ ಫಲಿತಾಂಶ; ನಿಷೇಧಾಜ್ಞೆ ಜಾರಿ

Update: 2018-06-09 14:41 GMT

ಬೆಂಗಳೂರು, ಜೂ.9: ರಾಜ್ಯ ವಿಧಾನಪರಿಷತ್ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಯ ಮತ ಎಣಿಕೆ ಜೂ.12ರಂದು ನಡೆಯಲಿದ್ದು, ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಆದೇಶಿಸಿದ್ದಾರೆ.

ಅಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ಮತ ಎಣಿಕೆ ಕೇಂದ್ರವಾದ ಸರಕಾರಿ ರಾಮ್ ನಾರಾಯಣ್ ಚಲ್ಲಾರಾಮ್ ಕಾಲೇಜಿನ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಮೆರವಣಿಗೆ ಮತ್ತು ಸಭೆಗಳನ್ನು ನಿಷೇಧಿಸಿದೆ.

ಕಾನೂನು ಭಂಗ ಮಾಡುವ ಉದ್ದೇಶದಿಂದ 5 ಅಥವಾ ಹೆಚ್ಚು ಜನರ ಗುಂಪು ಸೇರಬಾರದು ಹಾಗೂ ಮಾರಕಾಸ್ತ್ರಗಳನ್ನಿಡಿದುಕೊಂಡು ಓಡಾಡಬಾರದು, ಮತ ಎಣಿಕೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದಲೂ ಖಾಸಗಿ ಆಸ್ತಿ, ಪಾಸ್ತಿಗಳಿಗೆ ನಷ್ಟ ಉಂಟು ಮಾಡುವ ಘಟನೆಗಳನ್ನು ತಡೆಯುವ ಉದ್ದೇಶದಿಂದ ಈ ನಿಷೇಧಾಜ್ಞೆ ಜಾರಿಗೊಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News