×
Ad

ತುಮಕೂರು: ಎಲ್ಲಾ ವರ್ಗದ ಮಕ್ಕಳಿಗೆ ಉಚಿತ ಬಸ್ ಪಾಸ್ ವಿತರಣೆಗೆ ಒತ್ತಾಯ

Update: 2018-06-09 21:50 IST

ತುಮಕೂರು,ಜೂ.09: ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ಒದಗಿಸಲು ಸರಕಾರ ಕೂಡಲೇ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಹಾಗೂ ಅಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೆಷನ್ ಶನಿವಾರ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿ, ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿತು.

ನಗರದ ಟೌನ್‍ಹಾಲ್ ವೃತ್ತದಿಂದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ವಿದ್ಯಾರ್ಥಿಗಳು ಸರಕಾರ ಕೂಡಲೇ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‍ಓ ಜಿಲ್ಲಾಧ್ಯಕ್ಷ ಮಾದಪ್ಪ ಎಸ್.ಕೆ, ಹಿಂದಿನ ರಾಜ್ಯ ಸರಕಾರದ ಉಚಿತ ಬಸ್‍ಪಾಸ್ ಘೋಷಣೆಯನ್ನು ಕೂಡಲೇ ಈಡೇರಿಸಬೇಕು. ಅದಕ್ಕೆ ಮೀಸಲಿರಿಸಿರುವ ಹಣ ವಿದ್ಯಾರ್ಥಿಗಳ ಬಸ್‍ಪಾಸ್‍ಗೆ ಬಳಸಬೇಕು ಎಂದು ಹೇಳಿದರು.

ಜಿಲ್ಲಾ ಸಂಘಟನಾಕಾರರಾದ ಶ್ರೀಮತಿ ಎಂ.ವಿ ಕಲ್ಯಾಣಿ ಮಾತನಾಡಿ, ಇಂದು ವಿದ್ಯಾರ್ಥಿಗಳು ಹಲವಾರು ಶೈಕ್ಷಣಿಕ ಸಮಸ್ಯಗಳನ್ನು ಎದುರಿಸುತ್ತಿದ್ದಾರೆ. ಬೆಲೆ ಏರಿಕೆ, ದುಬಾರಿ ಶುಲ್ಕದ ಪರಿಣಾಮ ಪೋಷಕರು ತಮ್ಮ ಮಕ್ಕಳ ವಿದ್ಯಾರ್ಜನೆಗಾಗಿ ಹಣವನ್ನು ಹೊಂದಿಸುವುದಾಗಿದ್ದು, ಜೀವನ ನಿರ್ವಹಣೆ ಕಷ್ಟಕರವಾಗಿದೆ. ಆದ್ದರಿಂದ ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸಬೇಕಾಗಿರುವುದು ಸರಕಾರದ ಜವಾಬ್ದಾರಿ. ಉಚಿತ ಬಸ್ ಪಾಸ್‍ಯೋಜನೆಯನ್ನು ಸರಕಾರವು ಶೀಘ್ರವಾಗಿ ಜಾರಿಗೆ ತರಬೇಕೆಂದು ಒತ್ತಾಯಿಸಿದರು. 

ಪ್ರತಿಭಟನೆಯಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಉಚಿತ ಬಸ್‍ಪಾಸ್ ಒದಗಿಸುವಂತೆ ಆಗ್ರಹಿಸಿದ ಮನವಿ ಪ್ರತವನ್ನು ತುಮಕೂರು ಸಾರಿಗೆ ಇಲಾಖೆಯ ಡಿಪೊ ಮ್ಯಾನೇಜರ್ ಮೂಲಕ ರಾಜ್ಯ ಸರಕಾರದ ಮುಖ್ಯಮಂತ್ರಿಗಳಿಗೆ ನೀಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News