ಒಂದು ವಾರದಲ್ಲಿ ಎಲ್ಲವೂ ಸರಿಹೋಗಲಿದೆ: ಸಿಎಂ ಎಚ್.ಡಿ.ಕುಮಾರಸ್ವಾಮಿ
Update: 2018-06-09 23:13 IST
ಮಂಡ್ಯ,ಜೂ.09: ಒಂದು ವಾರ ತಾಳ್ಮೆಯಿಂದ ಇರಿ. ಎಲ್ಲವೂ ಸರಿ ಹೋಗುತ್ತದೆ, ಮುಂದಿನ ದಿನಗಳಲ್ಲಿ ಸುಭದ್ರ ರೀತಿಯಲ್ಲಿ ಸರಕಾರ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಎಚ್.ಡಿ,ಕುಮಾರಸ್ವಾಮಿ ಹೇಳಿದ್ದಾರೆ.
ಶನಿವಾರ ದಂಪತಿ ಸಹಿತ ಮೈಸೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಗರದ ಸಂಜಯ ವೃತ್ತದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆ ಹಂಚಿಕೆ ಗೊಂದಲ ಸರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಭಾರಿಗೆ ಜಿಲ್ಲೆಗೆ ಆಗಮಿಸಿದ ಕುಮಾರಸ್ವಾಮಿ ಅವರಿಗೆ ಪಕ್ಷದ ಮುಖಂಡರು ಹಾಗೂ ಅಭಿಮಾನಿಗಳು ಸ್ವಾಗತ ಕೋರಿದರು.