8ನೆ ತರಗತಿ ಕಲಿತವರಿಗೆ ಉನ್ನತ ಶಿಕ್ಷಣ ಖಾತೆ: ಜಗದೀಶ್ ಶೆಟ್ಟರ್

Update: 2018-06-10 12:44 GMT

ಹುಬ್ಬಳ್ಳಿ, ಜೂ. 10: ‘ಕೇವಲ ಎಂಟನೆ ತರಗತಿ ಓದಿರುವ ಜಿ.ಟಿ.ದೇವೇಗೌಡ ಅವರಿಗೆ ಉನ್ನತ ಶಿಕ್ಷಣ ಖಾತೆ ನೀಡಿದ್ದಾರೆ. ಇಂತಹವರು ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಏನು ತಾನೇ ಮಾತನಾಡುತ್ತಾರೆ’ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಶ್ನಿಸಿದ್ದಾರೆ.

ರವಿವಾರ ನಗರದಲ್ಲಿ ಏರ್ಪಡಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಿ.ಟಿ.ದೇವೇಗೌಡರ ಬದಲು ಶಿಕ್ಷಣ ಕ್ಷೇತ್ರದ ಬಗ್ಗೆ ಅಪಾರ ಜ್ಞಾನವುಳ್ಳ ಬಸವರಾಜ ಹೊರಟ್ಟಿ ಅವರನ್ನು ಸಚಿವರನ್ನಾಗಿ ಮಾಡಿದ್ದರೆ, ಆ ಸ್ಥಾನಕ್ಕೆ ಘನತೆ ತಂದು ಕೊಡುತ್ತಿದ್ದರು ಎಂದು ಹೇಳಿದರು.

ಉತ್ತರ ಕರ್ನಾಟಕ ಭಾಗದ ಹಿರಿಯ ರಾಜಕಾರಣಿ ಹಾಗೂ ವಿಧಾನ ಪರಿಷತ್ ಸದಸ್ಯ ಹೊರಟ್ಟಿ ಅವರಿಗೆ ಕಾಂಗ್ರೆಸ್-ಜೆಡಿಎಸ್ ಮೈತ್ತಿಕೂಟ ಸರಕಾರದಲ್ಲಿ ಸಚಿವ ಸ್ಥಾನ ಸಿಗಬೇಕು. ಹೊರಟ್ಟಿ ಅವರಂತಹ ಮುತ್ಸದ್ದಿಯನ್ನು ಸಚಿವ ಸ್ಥಾನಕ್ಕೆ ಪರಿಗಣಿಸದಿರುವುದು ಆಶ್ಚರ್ಯ ತಂದಿದೆ ಎಂದು ಶೆಟ್ಟರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News