×
Ad

ಮಂಗಳೂರು: ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ

Update: 2018-06-11 15:39 IST

ಮಂಗಳೂರು, ಜೂ.11: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಬೇಕಾಗಿದ್ದ ಏರ್ ಇಂಡಿಯಾ 680 ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ವಿಮಾನವು ರನ್‌ವೇಯಲ್ಲಿ ಇದ್ದಾಗಲೇ ಈ ದೋಷ ಕಂಡುಬಂದಿದೆ ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ನಿಲ್ದಾಣದಿಂದ ಏರ್ ಇಂಡಿಯಾ ವಿಮಾನವು ಮಧ್ಯಾಹ್ನ 12:40ಕ್ಕೆ ತೆರಳಲು ನಿಗದಿಯಾಗಿತ್ತು. ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ವಿಮಾನ ಹಾರಾಡದೇ ನಿಂತಿದೆ. ವಿಮಾನದಲ್ಲಿ ಕಂಡುಬಂದ ದೋಷದ ಕುರಿತು ತಂತ್ರಜ್ಞರು ಸಮಗ್ರ ಪರಿಶೀಲನೆ ಕೈಗೊಂಡಿದ್ದು, ವರದಿ ಬಂದ ಬಳಿಕವೇ ಮುಂದಿನ ನಿರ್ಧಾರವನ್ನು ಕೈಗೊಳ್ಳುವುದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News