ಸಿಎಂ ಆಗಲು ನನಗೆ ಇಷ್ಟವಿರಲಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-06-11 15:31 GMT

ಬೆಂಗಳೂರು, ಜೂ. 11: ನನಗೆ ಮುಖ್ಯಮಂತ್ರಿಯಾಗಲು ಇಷ್ಟವಿರಲಿಲ್ಲ. ಆದರೆ, ಕಾಂಗ್ರೆಸ್ ಪಕ್ಷದ ಮುಖಂಡರು ನೀವೇ ಮುಖ್ಯಮಂತ್ರಿಯಾಗಬೇಕೆಂದು ಒತ್ತಡ ಹೇರಿದ್ದರಿಂದ ಸಿಎಂ ಸ್ಥಾನವನ್ನು ಒಪ್ಪಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಸೋಮವಾರ ಇಲ್ಲಿನ ಗಾಂಧಿ ಭವನದಲ್ಲಿ ಮಾತನಾಡಿದ ಅವರು, ನಮ್ಮ ತಂದೆ ದೇವೇಗೌಡ, ಅವನಿಗೆ ಎರಡು ಬಾರಿ ಶಸ್ತ್ರ ಚಿಕಿತ್ಸೆಯಾಗಿದ್ದು, ಆರೋಗ್ಯ ಸರಿಯಿಲ್ಲ. ಆದುದರಿಂದ ನೀವೇ ಯಾರಾದರೂ ಮುಖ್ಯಮಂತ್ರಿಯಾಗಿ ಎಂದು ಕಾಂಗ್ರೆಸ್ ಪಕ್ಷದ ನಾಯಕರಿಗೆ ಮನವಿ ಮಾಡಿದ್ದರು.

ಈ ಸಂದರ್ಭದಲ್ಲಿ ರಾಜ್ಯದ ಕಾಂಗ್ರೆಸ್ ಮುಖಂಡರು ಹಾಗೂ ಹೊಸದಿಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ನೀವೇ ಮುಖ್ಯಮಂತ್ರಿ ಆಗಬೇಕು ಎಂದು ಒತ್ತಾಯ ಮಾಡಿ ನನ್ನನ್ನು ಮುಖ್ಯಮಂತ್ರಿ ಮಾಡಿದ್ದಾರೆಂದ ಅವರು, ಕಾಂಗ್ರೆಸ್ ನಾಯಕರು ಕೊಟ್ಟಿರುವ ಅಧಿಕಾರವನ್ನು ಮುನ್ನಡೆಸುತ್ತಿದ್ದೇನೆ ಎಂದು ಹೇಳಿದರು.

ನನಗೆ ಯಾವುದೇ ರೀತಿಯಲ್ಲಿ ಹಣ ಮಾಡುವ ಹುಚ್ಚು ಇಲ್ಲ. ನನಗೆ ಎರಡು ಬಾರಿ ಚಿಕಿತ್ಸೆಯಾಗಿದೆ ಎಷ್ಟು ದಿನ ಬದುಕುತ್ತೇನೆ ಎಂಬುದು ನನಗೆ ಗೊತ್ತಿಲ್ಲ. ಇಂದು ದೇವರ ಅನುಗ್ರಹದಿಂದ ಈ ಜಾಗದಲ್ಲಿ ಕುಳಿತಿದ್ದೇನೆ. ಮಹಾತ್ಮ ಗಾಂಧೀಜಿಯವರ ಹೆಸರನ್ನು ಉಳಿಸುತ್ತೇನೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News