ವಸತಿ-ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ಯು.ಟಿ. ಖಾದರ್ ಸಭೆ

Update: 2018-06-11 15:43 GMT

ಬೆಂಗಳೂರು, ಜೂ. 11: ಆಡಳಿತ ಯಂತ್ರಾಂಗಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಎರಡೂ ಇಲಾಖೆ ಅಧಿಕಾರಿಗಳೊಂದಿಗೆ ಇಡೀ ದಿನ ಸಮಾಲೋಚನೆ ನಡೆಸಿದರು.

ಸೋಮವಾರ ವಿಕಾಸಸೌಧದಲ್ಲಿ ಬೆಳಗ್ಗೆ 10:30ರಿಂದ ಮಧ್ಯಾಹ್ನ 2ಗಂಟೆಯ ವರೆಗೆ ವಸತಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಖಾದರ್, ವಸತಿ ಇಲಾಖೆ ಸಿಬ್ಬಂದಿ, ಸಾಧನೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಯೋಜನೆಗಳ ಬಗ್ಗೆ ಮಾಹಿತಿ ಪಡೆದರು.

ರಾಜ್ಯದಲ್ಲಿನ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ-ಸೂಚನೆಗಳನ್ನು ನೀಡಿದರು. ಅಲ್ಲದೆ, ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿಯ ಭರ್ತಿಗೆ ತ್ವರಿತ ಕ್ರಮ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಅವರು ಇದೇ ವೇಳೆ ನಿರ್ದೇಶನ ನೀಡಿದರು.

ಮಧ್ಯಾಹ್ನ 2:30ರಿಂದ ಸಂಜೆ 6:30ರ ವರೆಗೆ ನಗರಾಭಿವೃದ್ಧಿ ಇಲಾಖೆಯಲ್ಲಿನ ಸಮಸ್ಯೆಗಳು ಹಾಗೂ ಪರಿಹಾರ ಕಲ್ಪಿಸುವ ಸಂಬಂಧ ಚರ್ಚಿಸಿದ ಸಚಿವ ಖಾದರ್, ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸುವ ಬಗ್ಗೆ ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನು ನೀಡಿದರು ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News