×
Ad

ಏಮ್ಸ್ ಗೆ ಭೇಟಿ ನೀಡಿ ವಾಜಪೇಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

Update: 2018-06-11 21:36 IST

ಹೊಸದಿಲ್ಲಿ, ಜೂ.11: ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಆಸ್ಪತ್ರೆಗೆ ಭೇಟಿ ನೀಡಿದರು.

ಕುಟುಂಬ ಸದಸ್ಯರು ಹಾಗು ವೈದ್ಯರೊಂದಿಗೆ ಮಾತುಕತೆ ನಡೆಸಿದ ಪ್ರಧಾನಿ ಮೋದಿ ವಾಯಪೇಯಿಯವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.

ಇಷ್ಟೇ ಅಲ್ಲದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಎಲ್.ಕೆ. ಅಡ್ವಾಣಿ, ಮುರಳೀಮನೋಹರ್ ಜೋಶಿ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News