×
Ad

ಉಡುಪಿ: ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ತರಬೇತಿ

Update: 2018-06-11 22:22 IST

ಉಡುಪಿ, ಜೂ.11: 2018-19ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ಹೆಚ್ಚಿನ ತರಬೇತಿ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಾಲ್ಕು ವರ್ಷದ ತರಬೇತಿ ಅವಧಿಯಲ್ಲಿ ಮಾಸಿಕ 5000 ರೂ. ಶಿಷ್ಯವೇತನ ಹಾಗೂ ತರಬೇತಿ ಅವಧಿಯಲ್ಲಿ ಕಾನೂನು ವೃತ್ತಿಗೆ ಸಂಬಂಧಿಸಿದ ಪುಸ್ತಕ ಖರೀದಿಸಲು 5000 ರೂ. ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 30. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574814ನ್ನು ಸಂಪರ್ಕಿಸುವಂತೆ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಉಡುಪಿ ಇವರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News