ವಾಜಪೇಯಿ ಆರೋಗ್ಯ ಸ್ಥಿರ

Update: 2018-06-12 06:58 GMT

ಹೊಸದಿಲ್ಲಿ, ಜೂ.12: ವಯೋಸಹಜ ಕಾಯಿಲೆಯ ಹಿನ್ನೆಲೆಯಲ್ಲಿ ಹೊಸದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ವಾಜಪೇಯಿ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಟಲ್‌ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿರವಾಗಿದ್ದು, . ಡಾ.ರಣದೀಪ್‌ ಗುಲೇರಿಯಾ ಅವರ ನೇತೃತ್ವದ ವೈದ್ಯರ ತಂಡ ವಾಜಪೇಯಿ ಅವರ ಆಗೋಗ್ಯದ ನಿಗಾವಹಿಸಿದ್ದಾರೆ ಎಂದು ಏಮ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News