ಮುಖ್ಯ ಕಾರ್ಯದರ್ಶಿ ರತ್ನ ಪ್ರಭಾ ವಿರುದ್ಧ ಎಸಿಬಿಗೆ ದೂರು
Update: 2018-06-12 16:46 IST
ಬೆಂಗಳೂರು, ಜೂ.12: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ವಿರುದ್ಧ ಅಧಿಕಾರ ದುರ್ಬಳಕೆ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ದೂರು ನೀಡಲಾಗಿದೆ.
ಮಂಗಳವಾರ ಇಲ್ಲಿನ ರೋಸ್‌ಕೋರ್ಸ್ ರಸ್ತೆಯ ಎಸಿಬಿ ಕಚೇರಿಗೆ ದೂರು ಸಲ್ಲಿಸಿದ ಉದ್ಯೋಗ ಮತ್ತು ತರಬೇತಿ ಇಲಾಖೆಯ ಮಾಜಿ ನೌಕರ ಶಂಕರ ದೇವೇಗೌಡ, ಉದ್ಯೋಗ ಮತ್ತು ತರಬೇತಿ ಇಲಾಖೆಯ ಒಟ್ಟು 62 ಜನರಿಗೆ ಹಿಂಭಡ್ತಿ ನೀಡಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದರೂ, ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು ಸುಪ್ರೀಂ ಕೋರ್ಟ್ ತೀರ್ಪಿಗೆ ವ್ಯತಿರಿಕ್ತವಾಗಿ ಸುಪ್ರೀಂ ಆದೇಶ ಜಾರಿಗೊಳಿಸದಂತೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶ ಜಾರಿಗೊಳಿಸದಂತೆ ಇಲಾಖಾ ಕಾರ್ಯದರ್ಶಿಗೆ ಒತ್ತಡ ಹೇರಿದ್ದಾರೆಂದು ಆರೋಪಿಸಿ ದೂರು ನೀಡಲಾಗಿದೆ. ರತ್ನ ಪ್ರಭಾ ಅವರು ಸುಪ್ರೀಂ ಕೋರ್ಟ್ ಆದೇಶ ಜಾರಿಯಾಗದಂತೆ ಕೊನೆಯ ಕ್ಷಣದಲ್ಲಿ ತಡೆ ಹಿಡಿದು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.