×
Ad

ಬೆಂಗಳೂರು: ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಯುವಕರ ತಂಡ ವಶಕ್ಕೆ

Update: 2018-06-12 18:26 IST

ಬೆಂಗಳೂರು, ಜೂ.12: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೈಕ್ ವ್ಹೀಲಿಂಗ್ ಹಾಗೂ ಡ್ರ್ಯಾಗ್‌ರೇಸ್ ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಆರೋಪದಡಿ 45 ಕ್ಕೂ ಅಧಿಕ ಯುವಕರ ತಂಡವನ್ನು ನೆಲಮಂಗಲ ಹಾಗೂ ನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. 

ಬೈಕ್ ಸವಾರರು ನೆಲಮಂಗಲ ತಾಲೂಕಿನ ಇಸ್ಲಾಂಪುರ ಹಾಗೂ ಬೆಂಗಳೂರು ನಗರ ಮೂಲದವರಾಗಿದ್ದು, 30 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ತುಮಕೂರು-ಬೆಂಗಳೂರು ರಾಷ್ಟ್ರೀಯ ರಸ್ತೆಯಲ್ಲಿ ಮಧ್ಯರಾತ್ರಿ ಹತ್ತಾರು ವಾಹನಗಳಲ್ಲಿ ವ್ಹಿಲೀಂಗ್ ಹಾಗೂ ಡ್ರ್ಯಾಗ್‌ರೇಸ್ ಮಾಡುತ್ತಿದ್ದಾರೆ. ಇದರಿಂದ ಇತರ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಯುವಕರ ಪೋಷಕರನ್ನು ಠಾಣೆಗೆ ಕರೆಸಿ ಈ ಬಗ್ಗೆ ಎಚ್ಚರಿಕೆ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News