ಬೆಂಗಳೂರು: ಪೆಟ್ರೋಲ್ ಬಂಕ್‌ಗೆ ನುಗ್ಗಿದ ಬಸ್; ತಪ್ಪಿದ ಅನಾಹುತ
Update: 2018-06-12 18:46 IST
ಬೆಂಗಳೂರು, ಜೂ.12: ವೇಗವಾಗಿ ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್, ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್‌ಗೆ ನುಗ್ಗಿರುವ ಘಟನೆ ಇಲ್ಲಿನ ಗೊರಗುಂಟೆ ಪಾಳ್ಯ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ 11:30ರ ಸುಮಾರಿಗೆ ಹಾಸನದಿಂದ ಮಾರ್ಗದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್, ಮಾರ್ಗ ಮಧ್ಯೆ ಗೊರಗುಂಟೆ ಪಾಳ್ಯದ ಸಿಗ್ನಲ್ ದಾಟಿದ ನಂತರ ಬ್ರೇಕ್ ವೈಫಲ್ಯಗೊಂಡು ನಿಯಂತ್ರಣ ತಪ್ಪಿ ಏಕಾಏಕಿ ಇಲ್ಲಿನ ಎಚ್‌ಪಿ ಪೆಟ್ರೋಲ್ ಬಂಕ್‌ಗೆ ನುಗ್ಗಿದೆ.
ಬಸ್ಸಿನಲ್ಲಿ ಒಟ್ಟು 11 ಮಂದಿ ಪ್ರಯಾಣಿಕರಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಪೆಟ್ರೋಲ್ ಹಾಕುವ ಕ್ಯಾಬಿನ್ ಪೈಪ್ ಲೈನ್, ತಡೆ ಗೋಡೆ, ಎರಡು ಬೈಕ್‌ಗಳಿಗೆ ಹಾನಿಯಾಗಿದೆ. ಈ ಸಂಬಂಧ ಯಶವಂತಪುರ ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.