×
Ad

ಜೂ.14: ಉಡುಪಿಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ

Update: 2018-06-12 21:06 IST

ಉಡುಪಿ, ಜೂ.12: ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಉಡುಪಿ, ಕರಾವಳಿ ಸ್ವಯಂಪ್ರೇರಿತ ರಕ್ತದಾನಿಗಳ ಸಂಘ ಗಂಗೊಳ್ಳಿ, ರಕ್ತ ನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಉಡುಪಿ ಮತ್ತು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಜೂ.14ರಂದು ಬೆಳಗ್ಗೆ 10:30ಕ್ಕೆ ಮಣಿಪಾಲದ ಪ್ರಗತಿನಗರದಲ್ಲಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಉದ್ಘಾಟಿಸಲಿದ್ದು, ಉಡುಪಿ ಜಿಪಂ ಸಿಇಒ ಶಿವಾನಂದ ಕಾಪಶಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರೆಡ್‌ಕ್ರಾಸ್‌ನಿಂದ ವಿಶ್ವ ರಕ್ತದಾನಿಗಳ ದಿನ:  ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ವಿಶ್ವ ರಕ್ತದಾನಿಗಳ ದಿನಾಚರಣೆ ಉಡುಪಿಯ ರೆಡ್‌ಕ್ರಾಸ್ ಭವನದಲ್ಲಿ ಗುರುವಾರ ಸಂಜೆ 4 ಗಂಟೆಗೆ ನಡೆಯಲಿದೆ.

ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ರಘುಪತಿ ಟ್ ಭಾಗವಹಿಸುವರು. ಈ ಸಂದರ್ಭದಲ್ಲಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ರಕ್ತದಾನದ ಬಗ್ಗೆ ಕ್ವಿಜ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದ 5 ರಕ್ತದಾನಿಗಳನ್ನು ಗೌರವಿಸಿ ಸನ್ಮಾನಿಸಲಾಗುವುದು.

ಅಧ್ಯಕ್ಷತೆಯನ್ನು ರೆಡ್‌ಕ್ರಾಸ್ ಸಂಸ್ಥೆಯ ಉಡುಪಿ ಸಭಾಪತಿ ಡಾ.ಉಮೇಶ್ ಪ್ರಭು ವಹಿಸುವರು. ಜಿಲ್ಲಾ ಘಟಕದ ಉಪಸಬಾಪತಿ ಡಾ.ಅಶೋಕ್ ಕುಮಾರ್ ವೈ.ಜಿ., ಗೌರವ ಖಜಾಂಚಿ ಟಿ.ಚಂದ್ರಶೇಖರ್, ಗೌರವ ಕಾರ್ಯದರ್ಶಿ ಬಾಲೃಷ್ಣ ಶೆಟ್ಟಿ ಕೆ ಉಪಸ್ಥಿತರಿರುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News