ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಗೆ ದೇಣಿಗೆ
ಉಡುಪಿ, ಜೂ.12: ಪರಿಸರದ ಬಗ್ಗೆ ವಿಶೇಷ ಕಾಳಜಿ ಹೊಂದಿ ಪ್ಲಾಸ್ಟಿಕ್ ಮುಕ್ತ ಅಲೆವೂರು ಗ್ರಾಮ ಎಂಬ ಪರಿಸರ ಸ್ನೇಹಿ ಕಾರ್ಯಕ್ರಮ ಹಮ್ಮಿಕೊಂಡಿ ರುವ ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಗೆ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಶತಮಾನೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಒಂದು ಲಕ್ಷ ದೇಣಿಗೆಯನ್ನು ಇತ್ತೀಚೆಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಕುಂದಾಪುರ ಉಪವಿಭಾಗ ಸಹಕಾರ ಸಂಘಗಳ ಸಹಾ ಯಕ ನಿಬಂಧಕಿ ಚಂದ್ರಪ್ರತಿಮ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಶತಮಾನೋತ್ಸವ ಸಮಿತಿ ಸಂಚಾಲಕ ಪುರುಷೋತ್ತಮ ಪಿ.ಶೆಟ್ಟಿ, ಸಂಘದ ಅಧ್ಯಕ್ಷ ಸಂಜೀವ ಕಾಂಚನ್, ಉಪಾಧ್ಯಕ್ಷ ಎಲ್.ಉಮಾನಾಥ್, ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಲೇಶ್ ಶೆಟ್ಟಿ, ದೇವೇಂದ್ರ ನಾಯಕ್ ಉಪಸ್ಥಿತರಿದ್ದರು.