×
Ad

ಕಫೀಲ್ ಖಾನ್ ಸಹೋದರನ ಮೇಲೆ ಗುಂಡಿನ ದಾಳಿ : ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲು

Update: 2018-06-12 22:25 IST

ಗೋರಖ್‌ಪುರ, ಜೂ. 12: ಉತ್ತರಪ್ರದೇಶದ ಮಕ್ಕಳ ತಜ್ಞ ಡಾ. ಕಫೀಲ್ ಖಾನ್ ಅವರ ಸಹೋದರ ಕಾಶಿಫ್ ಜಮೀಲ್ ಅವರ ಮೇಲಿನ ಗುಂಡಿನ ದಾಳಿಗೆ ಸಂಬಂಧಿಸಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಗೋರಖ್‌ಪುರ ಪೊಲೀಸರು ಮಂಗಳವಾರ ಪ್ರಥಮ ಮಾಹಿತಿ ವರದಿ ದಾಖಲಿಸಿದ್ದಾರೆ. ಈ ದಾಳಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸಂಭವಿಸಿರಬಹುದು. ಆದರೆ, ಇದು ತನ್ನ ವಿರುದ್ಧ ದಾಖಲಿಸಲಾದ ಸುಳ್ಳು ಪ್ರಕರಣಕ್ಕೆ ಸಂಬಂಧಿಸಿದೆ ಎಂಬುದು ಡಾ. ಖಾನ್ ಅವರ ಪ್ರತಿಪಾದನೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಉತ್ತರಪ್ರದೇಶ ಗೋರಖ್‌ಪುರದ ಬಿಆರ್‌ಡಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮಕ್ಕಳ ಸಾವು ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿ ಡಾ. ಖಾನ್ ಅವರನ್ನು ಬಂಧಿಸಲಾಗಿತ್ತು. 8 ತಿಂಗಳ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿತ್ತು. ಜಮೀಲ್ (35) ಅವರು ರವಿವಾರ ರಾತ್ರಿ ಗೋರಖ್‌ಪುರದಲ್ಲಿರುವ ನಿವಾಸಕ್ಕೆ ಹಿಂದಿರುಗುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಮೂರು ಬಾರಿ ಗುಂಡು ಹಾರಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News