ಸಂಸದೀಯ ಸಮಿತಿ ಮುಂದೆ ಹಾಜರಾದ ಆರ್‌ಬಿಐ ಗವರ್ನರ್ ಊರ್ಜಿತ್ ಪಟೇಲ್

Update: 2018-06-12 17:02 GMT

ಹೊಸದಿಲ್ಲಿ, ಜೂ. 12: ಕೆಟ್ಟ ಸಾಲ, ಬ್ಯಾಂಕ್ ವಂಚನೆ, ಹಣದ ಕೊರತೆ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿ ಆರ್‌ಬಿಐಯ ಗವರ್ನರ್ ಊರ್ಜಿತ್ ಪಟೇಲ್ ಸಂಸದೀಯ ಸಮಿತಿ ಸದಸ್ಯರಿಂದ ಕಠಿಣ ಪ್ರಶ್ನೆಗಳನ್ನು ಎದುರಿಸಿದ್ದಾರೆ. ಸಾಲದ ಅಡಮಾನ ಆಸ್ತಿಗೆ ಸಂಬಂಧಿಸಿದ ಬಿಕ್ಕಟ್ಟು ಎದುರಿಸುವ ವಿಶ್ವಾಸವನ್ನು ಆರ್‌ಬಿಐ ಗರ್ವರ್ನರ್ ವ್ಯಕ್ತಪಡಿಸಿದ್ದಾರೆ ಎಂದು ಹಣಕಾಸಿಗಿರುವ ಸಂಸದೀಯ ಸ್ಥಾಯಿ ಸಮಿತಿ ಸಭೆಯಲ್ಲಿ ಸಲ್ಲಿಸಲಾದ ಮೂಲಗಳು ತಿಳಿಸಿವೆ.

ಇತ್ತೀಚೆಗೆ ಎಟಿಎಂಗಳಲ್ಲಿ ನಗದು ಖಾಲಿ ಆಗಿರುವುದಕ್ಕೆ ಕಾರಣ ಹಾಗೂ ಬ್ಯಾಂಕ್ ವಂಚನೆ ಹತ್ತಿಕ್ಕಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳದೇ ಇರುವುದರ ಬಗ್ಗೆ ತಿಳಿಯ ಬಯಸುವುದಾಗಿ ಕಾಂಗ್ರೆಸ್‌ನ ಹಿರಿಯ ನಾಯಕ ವೀರಪ್ಪ ಮೊಯ್ಲಿ ನೇತೃತ್ವದ ಸಮಿತಿಯ ಕೆಲವು ಸದಸ್ಯರು ತಿಳಿಸಿದರು.

ಬ್ಯಾಂಕಿಂಗ್ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪಟೇಲ್ ಅವರು ಸಮಿತಿಗೆ ತಿಳಿಸಿದರು. ‘‘ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸುವ ವಿಶ್ವಾಸ ನಮಗಿದೆ.’’ ಎಂದು ಗವರ್ನರ್ ಹೇಳಿಕೆಯನ್ನು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News