×
Ad

ರೊಹಿಂಗ್ಯಾ ನಿರಾಶ್ರಿತರ ಶಿಬಿರ ಸಮೀಪ ಭೂಕುಸಿತ; 11 ಸಾವು

Update: 2018-06-12 22:50 IST

ಢಾಕಾ, ಜೂ. 12: ಸುಮಾರು 10 ಲಕ್ಷ ರೊಹಿಂಗ್ಯಾ ನಿರಾಶ್ರಿತರು ಆಶ್ರಯ ಪಡೆಯುತ್ತಿರುವ ಬಾಂಗ್ಲಾದೇಶದ ಶಿಬಿರಗಳ ಸಮೀಪ ಮಂಗಳವಾರ ಸಂಭವಿಸಿದ ಭೂಕುಸಿತಗಳಲ್ಲಿ ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ.

ಮುಂಗಾರು ಮಳೆಯಿಂದಾಗಿ ಗುಡ್ಡಗಳ ಮಣ್ಣು ಸಡಿಲಗೊಂಡು ಭೂಕುಸಿತ ಸಂಭವಿಸಿದೆ.

ಈ ಪ್ರದೇಶದಲ್ಲಿ ಮುಂದಿನ ತಿಂಗಳುಗಳಲ್ಲಿ ಭಾರೀ ಮಳೆ ಸುರಿಯಲಿದ್ದು, ಮಾನವೀಯ ದುರಂತಗಳು ಸಂಭವಿಸುವ ಸಾಧ್ಯತೆಗಳಿವೆ ಎಂಬುದಾಗಿ ಅಂತಾರಾಷ್ಟ್ರೀಯ ನೆರವು ಸಂಸ್ಥೆಗಳು ಈಗಾಗಲೇ ಎಚ್ಚರಿಕೆ ನೀಡಿರುವುದನ್ನು ಸ್ಮರಿಸಬಹುದಾಗಿದೆ.

‘‘ನನಿಯರ್‌ಚಾರ್‌ನಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದ್ದಾರೆ. ಹಲವಾರು ಮಂದಿ ನಾಪತ್ತೆಯಾಗಿದ್ದಾರೆ’’ ಎಂದು ಜಿಲ್ಲಾಧಿಕಾರಿ ಮಮುನುರ್ ರಶೀದ್ ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದರು.

ನೆರೆಯ ಕಾಕ್ಸ್‌ಬಝಾರ್ ಜಿಲ್ಲೆಯಲ್ಲಿ ಭೂಕುಸಿತದಿಂದಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News