ಹರಪನಹಳ್ಳಿ: ಬ್ಯಾಂಕ್‍ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ
Update: 2018-06-12 23:29 IST
ಹರಪನಹಳ್ಳಿ,ಜೂ.12: ಸಾಲ ನೀಡಲು ಬ್ಯಾಂಕ್ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ರೈತನೊಬ್ಬ ಬ್ಯಾಂಕ್‍ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಹಲುವಾಗಲು ಗ್ರಾಮದ ಪ್ರಗತಿ ಕೃಷ್ಣ ಬ್ಯಾಂಕಿನಲ್ಲಿ ಮಂಗಳವಾರ ನಡೆಗಿದೆ.
ನಿಟ್ಟೂರು ಗ್ರಾಮದ ಪ್ರಕಾಶ್(35) ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ ರೈತ. ಇವರು ಕಳೆದ ನಾಲ್ಕು ತಿಂಗಳಿನಿಂದಲೂ ಸಾಲ ಪಡೆಯಲು ಬ್ಯಾಂಕಿಗೆ ಅಲೆದಾಡಿದ್ದರು. ಬ್ಯಾಂಕ್ ಅಧಿಕಾರಿಗಳು ವಿನಾಕಾರಣ ಸಾಲ ನೀಡಲು ವಿಳಂಬ ಮಾಡಿದ್ದಾರೆಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಅಸ್ವಸ್ಥಗೊಂಡ ರೈತನನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹಲುವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.