ಬೆಂಗಳೂರು: ಶ್ಯಾಮನೂರು ಶಿವಶಂಕರಪ್ಪಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಧರಣಿ

Update: 2018-06-13 12:54 GMT

ಬೆಂಗಳೂರು, ಜೂ. 13: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಶ್ಯಾಮನೂರು ಶಿವಶಂಕರಪ್ಪಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನಿವಾಸದ ಎದುರು ಧರಣಿ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ಮೊದಲ ಸಚಿವ ಸಂಪುಟ ವಿಸ್ತರಣೆಯಲ್ಲಿ ಶ್ಯಾಮನೂರು ಶಿವಶಂಕರಪ್ಪಗೆ ಸಚಿವ ಸ್ಥಾನ ನೀಡಲಿಲ್ಲ. ಹೀಗಾಗಿ, ಎರಡನೇ ಬಾರಿಯ ಸಂಪುಟ ವಿಸ್ತರಣೆ ವೇಳೆ ಶ್ಯಾಮನೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಲಾಯಿತು.

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಸ್ಥಳೀಯ ನಗರ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಮಂಜನಾಥ್, ಶಿವಶಂಕರಪ್ಪಗೆ ಸಚಿವ ಸ್ಥಾನ ನೀಡದಿದ್ದರೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಎಚ್ಚರಿಸಿದರು.

ಮಂತ್ರಿ ಸ್ಥಾನ ಕೊಡಿ ಇಲ್ಲವಾದರೆ ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಮರೆತುಬಿಡಿ. ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ದಾವಣಗೆರೆಯಲ್ಲಿ ಕಾಂಗ್ರೆಸ್‌ಗೆ ಕಷ್ಟವಾಗಲಿದೆ ಎಂದು ಹೇಳಿದರು. ಈ ವೇಳೆ ಪ್ರತಿಕ್ರಿಯಿಸಿದ ಪರಮೇಶ್ವರ್ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಆ ಬಳಿಕ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಬಳಿಯೂ ತೆರಳಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News