ಬಿಜೆಪಿ, ಆರೆಸ್ಸೆಸ್, ಮೋದಿ ವಿರುದ್ಧದ ಮಹಾಮೈತ್ರಿ ಜನರ ಸಂವೇದನೆ: ರಾಹುಲ್ ಗಾಂಧಿ

Update: 2018-06-13 16:47 GMT

ಮುಂಬೈ, ಜೂ. 13: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ಧ ಪ್ರತಿಪಕ್ಷಗಳ ಮಹಾಮೈತ್ರಿ ಜನರ ಸಂವೇದನೆ ಹೊರತು, ರಾಜಕೀಯ ಪಕ್ಷಗಳ ಹಿತಾಸಕ್ತಿ ಅಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

ಮೋದಿ ಹಾಗೂ ಕೇಂದ್ರದ ಆಡಳಿತಾರೂಢ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿರುವ ರಾಹುಲ್ ಗಾಂಧಿ, ಪ್ರಧಾನಿ ಹಾಗೂ ಬಿಜೆಪಿ ರಾಷ್ಟ್ರದ ಸಂವಿಧಾನ ಹಾಗೂ ಇತರ ಸಂಸ್ಥೆಗಳ ವಿರುದ್ಧ ದಾಳಿ ಮಾಡುತ್ತಿದೆ ಎಂದರು.

‘‘ಬಿಜೆಪಿ, ಆರೆಸ್ಸೆಸ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ಮಹಾ ಮೈತ್ರಿ ಜನರ ಸಂವೇದನೆ. ಕೇವಲ ಪಕ್ಷಗಳ ಹಿತಾಸಕ್ತಿ ಅಲ್ಲ.’’ ಎಂದು ರಾಹುಲ್ ಗಾಂಧಿ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಆದಾಗ್ಯೂ, ಪ್ರತಿಪಕ್ಷಗಳ ಮಹಾಮೈತ್ರಿ ನೇತೃತ್ವವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆಗೆ ರಾಹುಲ್ ಗಾಂಧಿ ಉತ್ತರಿಸಿಲ್ಲ. ಎರಡು ದಿನಗಳ ಪ್ರವಾಸದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮಂಗಳವಾರ ಮಹಾರಾಷ್ಟ್ರಕ್ಕೆ ಆಗಮಿಸಿದ್ದಾರೆ. ಸಾಮಾನ್ಯ ಜನರಿಗೆ ಪರಿಹಾರ ಒದಗಿಸಲು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಜಿಎಸ್‌ಟಿ ಅಡಿಯಲ್ಲಿ ತರಲು ಪ್ರತಿಪಕ್ಷ ಮೋದಿ ಅವರನ್ನು ಕೇಳುತ್ತಿದೆ. ಆದರೆ, ಅವರು ಆಸಕ್ತಿ ವಹಿಸುತ್ತಿಲ್ಲ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News