ಚಿಕ್ಕಮಗಳೂರಲ್ಲಿ ಭಾರೀ ಮಳೆ: ಹೆಬ್ಬಾಳ ಸೇತುವೆ ಸಂಪೂರ್ಣ ಮುಳುಗಡೆ
Update: 2018-06-14 15:53 IST
ಚಿಕ್ಕಮಗಳೂರು, ಜೂ. 14: ಕಾಫಿನಾಡು ಚಿಕ್ಕಮಗಳೂರಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಕಳಸ - ಹೊರನಾಡು - ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಾಗಿದ್ದು, ಹೆಬ್ಬಾಳೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ.
ಸೇತುವೆ ಕಾಣದಂತೆ ನೀರು ಹರಿಯುತಿದ್ದು, ಬಸ್, ಪ್ರವಾಸಿ ವಾಹನಗಳ ಸಂಚಾರವನ್ನು ತಡೆಯಲಾಗಿದೆ. ಮೂಡಿಗೆರೆ ತಾಲೂಕಿನ ಹೊರನಾಡು ಸಮೀಪದಲ್ಲಿರುವ ಹೆಬ್ಬಾಳ ಸೇತುವೆ ಮುಳುಗಡೆಯಾಗಿದ್ದು, ಕಳಸ - ಹೊರನಾಡು ಸಂಪರ್ಕ ಕಡಿತಗೊಂಡಿದೆ. ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಇಲ್ಲಿನ ಸ್ಥಳೀಯರು ಆತಂಕದಲ್ಲಿದ್ದಾರೆ.