ಹಾಸನ: ನೂತನ ರೈಲು ಸಂಚಾರಕ್ಕೆ ಸಚಿವರಿಂದ ಚಾಲನೆ
Update: 2018-06-14 22:33 IST
ಹಾಸನ, ಜೂ.14: ಹಾಸನ ರೈಲ್ವೆ ನಿಲ್ದಾಣದಲ್ಲಿಂದು ಲೋಕೋಪಯೋಗಿ ಸಚಿವರಾದ ಹೆಚ್.ಡಿ ರೇವಣ್ಣ ಅವರು ಹಾಸನದಿಂದ ಯಶವಂತಪುರ ಮಾರ್ಗವಾಗಿ ಸೊಲ್ಲಾಪುರಕ್ಕೆ ಹೊರಡುವ ಸೊಲ್ಲಾಪುರ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಹೆಚ್.ಕೆ ಕುಮಾರಸ್ವಾಮಿ, ಸಿ.ಎನ್ ಬಾಲಕೃಷ್ಣ, ಕೆ.ಎಸ್.ಲಿಂಗೇಶ್, ಪ್ರೀತಂ ಜೆ ಗೌಡ ವಿಧಾನ ಪರಿಷತ್ ಸದಸ್ಯರಾದ ಎಂ.ಎ ಗೋಪಾಲಸ್ವಾಮಿ, ಜಿಲ್ಲಾಧಿಕಾರಿಗಳಾದ ಡಾ. ಪಿ.ಸಿ ಜಾಫರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಾದ ಜಿ ಜಗದೀಶ್ ಮತ್ತಿತರರು ಹಾಜರಿದ್ದರು.