ನನ್ನ ಪತ್ನಿ ಡಿಂಪಲ್ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ: ಅಖಿಲೇಶ್

Update: 2018-06-15 09:56 GMT

ಲಕ್ನೋ,ಜು.15: ಕನೌಜ್ ಲೋಕಸಭಾ ಕ್ಷೇತ್ರದ ಸದಸ್ಯೆಯಾಗಿರುವ ತನ್ನ ಪತ್ನಿ ಡಿಂಪಲ್ 2019ರ ಸಾರ್ವತ್ರಿಕ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ ಎಂದು ಪ್ರಕಟಿಸಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರು, ತನ್ನ ಪಕ್ಷದಲ್ಲಿ ಸ್ವಜನ ಪಕ್ಷಪಾತದ ಆರೋಪವನ್ನು ಎದುರಿಸಲು ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಪಕ್ಷದಲ್ಲಿ ಇಂತಹುದೇ ಕ್ರಮವನ್ನು ತೆಗೆದುಕೊಳ್ಳುವಂತೆ ಅವರು ಬಿಜೆಪಿಗೆ ಸವಾಲು ಹಾಕಿದ್ದಾರೆ.

ಕನೌಜ್‌ನಿಂದ ಸ್ವತಃ ತಾನೇ ಸ್ಪರ್ಧಿಸುವುದಾಗಿ ಪ್ರಕಟಿಸಿದ ಅವರು ತನ್ನ ತಂದೆ ಹಾಗೂ ಪಕ್ಷದ ಪೋಷಕ ಮುಲಾಯಂ ಸಿಂಗ್ ಯಾದವ ಅವರು ಮೈನಪುರಿ ಕ್ಷೇತ್ರದಿಂದ ಪುನರಾಯ್ಕೆ ಬಯಸಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News