ಗಂಭೀರ ಸ್ಥಿತಿಯಲ್ಲಿದ್ದ ಕಾರು ಚಾಲಕ ಮೃತ್ಯು
Update: 2018-06-15 16:22 IST
ಕಾಸರಗೋಡು, ಜೂ.15: ಕಾಸರಗೋಡು ಅಣಂಗೂರುನಲ್ಲಿ ನಡೆದ ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ನಿಜಾಮುದ್ದೀನ್ (35) ಮೃತಪಟ್ಟಿದ್ದಾರೆ.
ಇಂದು ಮಧ್ಯಾಹ್ನದ ವೇಳೆ ಸಂಭವಿಸಿದ ಸರಣಿ ಅಪಘಾತದಲ್ಲಿ ಕಾರು ಚಲಾಯಿಸುತ್ತಿದ್ದ ಪಡುವಡ್ಕದ ನಿಜಾಮುದ್ದೀನ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.