ಶನಿವಾರ ಧರ್ಮಸ್ಥಳಕ್ಕೆ ಸಿದ್ದರಾಮಯ್ಯ
Update: 2018-06-16 00:29 IST
ಮಂಗಳೂರು, ಜೂ. 16: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ವಾರಗಳ ನ್ಯಾಚುರೋಪತಿ ಚಿಕಿತ್ಸೆಗಾಗಿ ಶನಿವಾರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ.
ಬೆಂಗಳೂರಿನಿಂದ ಶನಿವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಅಗಮಿಸುವ ಅವರು ಅಲ್ಲಿಂದ ಧರ್ಮಸ್ಥಳಕ್ಕೆ ಪ್ರಯಾಣಿಸಲಿದ್ದಾರೆ. ಧರ್ಮಸ್ಥಳದಲ್ಲಿರುವ ನ್ಯಾಚುರೋಪತಿ ಚಿಕಿತ್ಸಾ ಕೇಂದ್ರದಲ್ಲಿ ಮುಂದಿನ ಎರಡು ವಾರಗಳ ಕಾಲ ವಿರಾಮ ಹಾಗು ಚಿಕಿತ್ಸೆ ಪಡೆಯಲಿದ್ದಾರೆ.
5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತ ಪಡೆಯಲು ವಿಫಲವಾದ ಹಿನ್ನೆಲೆಯಲ್ಲಿ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವಾಗಲಿಲ್ಲ. ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಬಾದಾಮಿಯಲ್ಲಿ ಗೆದ್ದು, ಈಗ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಕೂಟದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿದ್ದಾರೆ.