ಜೂ. 17: 'ಎಂ ಫ್ರೆಂಡ್ಸ್' ವತಿಯಿಂದ ವೆನ್ಲಾಕ್ ಆಸ್ಪತ್ರೆಯ ಸಿಬ್ಬಂದಿ ಜೊತೆ ಈದ್ ಸೌಹಾರ್ದ ಕಾರ್ಯಕ್ರಮ
Update: 2018-06-16 20:02 IST
ಮಂಗಳೂರು, ಜೂ. 16: ಎಂ ಫ್ರೆಂಡ್ಸ್ ಮಂಗಳೂರು ವತಿಯಿಂದ ವೆನ್ಲಾಕ್ ಆಸ್ಪತ್ರೆಯ ಸಿಬ್ಬಂದಿ ಜೊತೆ ಈದ್ ಸೌಹಾರ್ದ ಕಾರ್ಯಕ್ರಮವು ಜೂ. 17ರಂದು ಪೂರ್ವಾಹ್ನ 11:30ಕ್ಕೆ ಐಎಂಎ ಹಾಲ್ ನಲ್ಲಿ ನಡೆಯಲಿದೆ.
ಎಂ ಫ್ರೆಂಡ್ಸ್ ಇದರ ಮುಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವ ಯು.ಟಿ.ಖಾದರ್, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಆಸ್ಪತ್ರೆಯ ಅಧೀಕ್ಷಕರು, ಜಿಲ್ಲಾ ಸರ್ಜನ್ ಡಾ.ರಾಜೇಶ್ವರಿ ದೇವಿ ಎಚ್.ಆರ್. ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞಿ ಈದ್ ಸಂದೇಶ ನೀಡಲಿದ್ದಾರೆ.
ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಜೊತೆ ಇರುವವರಿಗೆ ಪ್ರತಿದಿನ ಎಂ ಫ್ರೆಂಡ್ಸ್ ಸಂಸ್ಥೆ ನೀಡುತ್ತಿರುವ ರಾತ್ರಿಯ ಊಟಕ್ಕೆ ನೆರವು ನೀಡಿರುವ ದಾನಿಗಳಿಗೆ ಗೌರವ ಸಮರ್ಪಣೆ ನಡೆಯಲಿದೆ ಎಂದು ಎಂಫ್ರೆಂಡ್ಸ್ ಅಧ್ಯಕ್ಷರು, ಟ್ರಸ್ಟಿಗಳು ಮತ್ತು ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.