ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಂದ ರಾಜ್ಯದ ಇಬ್ಬರು ರಾಜಕಾರಣಿಗಳ ಹತ್ಯೆಗೆ ಸಂಚು?

Update: 2018-06-16 16:01 GMT

ಬೆಂಗಳೂರು, ಜೂ.16: ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆಗೈದ ಆರೋಪಿಗಳು ರಾಜ್ಯದ ಇಬ್ಬರು ರಾಜಕೀಯ ನಾಯಕರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬುದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಎಸ್‌ಐಟಿ ಅಧಿಕಾರಿಗಳು ಗೌರಿ ಲಂಕೇಶ್ ಹತ್ಯೆಯ ಪ್ರಮುಖ ಆರೋಪಿ ಪರಶುರಾಮ್ ವಾಗ್ಮೋರೆ ತಂಡವನ್ನು ತನಿಖೆ ನಡೆಸುತ್ತಿದ್ದು, ಈ ವೇಳೆ ಆರೋಪಿಗಳ ಟಾರ್ಗೆಟ್ ಲಿಸ್ಟ್‌ನಲ್ಲಿ ಮಾಜಿ ಸಚಿವರಾದ ಎಂ.ಬಿ.ಪಾಟೀಲ್ ಮತ್ತು ವಿನಯ್ ಕುಲಕರ್ಣಿ ಹೆಸರು ಇರುವ ಅಂಶ ಬೆಳಕಿಗೆ ಬಂದಿದೆ.

ಪ್ರತ್ಯೇಕ ಲಿಂಗಾಯತ ಧರ್ಮ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂ.ಬಿ.ಪಾಟೀಲ್ ಮತ್ತು ವಿನಯ್ ಕುಲಕರ್ಣಿ ಹತ್ಯೆಗೆ ಸಂಚು ಹೂಡಿದ್ದರು ಎಂಬುದನ್ನು ಎಸ್‌ಐಟಿ ತನಿಖೆಯ ವೇಳೆ ಆರೋಪಿಯಗಳು ಬಾಯಿ ಬಿಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News