25,600 ಅತಿಥಿ ಶಿಕ್ಷಕರ ನೇಮಕ

Update: 2018-06-16 18:49 GMT

ಬೆಂಗಳೂರು, ಜೂ.16: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಕೊರತೆ ನೀಗಿಸಲು 25,600 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಪ್ರಾಥಮಿಕ 12,500, ಮಾಧ್ಯಮಿಕ ಶಾಲೆಗಳಲ್ಲಿ 10,000 ಹಾಗೂ ಪ್ರೌಢಶಾಲೆಗಳಲ್ಲಿ 3,100 ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಮಾಧ್ಯಮಿಕ ಶಾಲೆಗಳಲ್ಲಿ ಖಾಲಿಯಿದ್ದ 10 ಸಾವಿರ ಪದವೀಧರ ಶಿಕ್ಷಕರ ಹುದ್ದೆಗಳ ಭರ್ತಿಗೆ ಈಗಾಗಲೆ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಈ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡು ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲು ಇನ್ನು ಐದಾರು ತಿಂಗಳು ಆಗಲಿದ್ದು, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಹುದ್ದೆಗಳಿಗೂ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗೆ ಶಿಕ್ಷಕರು ಕರ್ತವ್ಯಕ್ಕೆ ಹಾಜರಾದ ನಂತರ ಅತಿಥಿ ಶಿಕ್ಷಕರ ನೇಮಕಾತಿ ರದ್ದಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News