ಹಿಮಾಚಲ ಪ್ರದೇಶದಲ್ಲಿ ಭೂಕಂಪ

Update: 2018-06-17 05:58 GMT

ಶಿಮ್ಲಾ,ಜೂ.17: ಹಿಮಾಚಲ ಪ್ರದೇಶದಲ್ಲಿ ರವಿವಾರ ಬೆಳಗಿನ ಜಾವ ಭೂಕಂಪ ಸಂಭವಿಸಿದ್ದು,ಯಾವುದೇ ಸಾವುನೋವು ವರದಿಯಾಗಿಲ್ಲ.

ನಸುಕಿನ 3:36ಕ್ಕೆ ಭೂಮಿ ನಡುಗಿದ್ದು,ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.2ರಷ್ಟಿತ್ತು ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದರು.

ಭೂಕಂಪದ ಕೇಂದ್ರಬಿಂದು ಚೀನಾದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಕಿನ್ನೌರ್ ಜಿಲ್ಲೆಗೆ ಹೊಂದಿಕೊಂಡಿರುವ ಶಿಮ್ಲಾ ಪ್ರದೇಶದಲ್ಲಿತ್ತು. ಇತ್ತೀಚಿನ ದಿನಗಳಲ್ಲಿ ಹಿಮಾಚಲ ಪ್ರದೇಶದಲ್ಲಿ ಭೂಕಂಪ ಸಂಭವಿಸಿರುವುದು ಇದು ಎರಡನೇ ಬಾರಿಯಾಗಿದೆ. ಜೂನ್ 14ರಂದು ಜಮ್ಮು-ಕಾಶ್ಮೀರಕ್ಕೆ ಹೊಂದಿಕೊಂಡಿರುವ ಚಂಬಾ ಜಿಲ್ಲೆಯಲ್ಲಿ ರಿಕ್ಟರ್ ಮಾಪಕದಲ್ಲಿ 4.6ರಷ್ಟಿದ್ದ ಭೂಕಂಪ ಸಂಭವಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News