2ನೇ ಏಕದಿನ: ಆಸ್ಟ್ರೇಲಿಯಕ್ಕೆ ಸೋಲುಣಿಸಿದ ಇಂಗ್ಲೆಂಡ್

Update: 2018-06-17 19:03 GMT

ಕಾರ್ಡಿಫ್, ಜೂ.17: ಜೇಸನ್ ರಾಯ್ ಸಿಡಿಸಿದ ಶತಕದ ನೆರವಿನಿಂದ ಇಂಗ್ಲೆಂಡ್ ತಂಡ ಆಸ್ಟ್ರೇಲಿಯ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ 38 ರನ್‌ಗಳಿಂದ ಜಯ ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಏಕದಿನ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

 ಇಲ್ಲಿ ಶನಿವಾರ ನಡೆದ ಪಂದ್ಯದಲ್ಲಿ 5ನೇ ಶತಕ ದಾಖಲಿಸಿದ ರಾಯ್ (120) ಹಾಗೂ ಹಂಗಾಮಿ ನಾಯಕ ಜೋಸ್ ಬಟ್ಲರ್(ಔಟಾಗದೆ 91) ಅರ್ಧಶತಕದ ನೆರವಿನಿಂದ ಇಂಗ್ಲೆಂಡ್ ತಂಡ 8 ವಿಕೆಟ್‌ಗೆ 342 ರನ್ ಗಳಿಸಿತು.

ಗೆಲ್ಲಲು ಕಠಿಣ ಸವಾಲು ಪಡೆದ ವಿಶ್ವ ಚಾಂಪಿಯನ್ ಆಸ್ಟ್ರೇಲಿಯ ತಂಡ ಆರಂಭಿಕ ಆಟಗಾರ ಶಾನ್ ಮಾರ್ಷ್(131) ಶತಕದ ಹೊರತಾಗಿಯೂ 304 ರನ್‌ಗೆ ಆಲೌಟಾಯಿತು. ಈ ಮೂಲಕ ಕಳೆದ 8 ಪಂದ್ಯಗಳಲ್ಲಿ 7ನೇ ಸೋಲು ಕಂಡಿತು.

ವೇಗಿದ್ವಯರಾದ ಲಿಯಾಮ್ ಪ್ಲಂಕೆಟ್(4-53) ಹಾಗೂ ಲೆಗ್-ಸ್ಪಿನ್ನರ್ ಆದಿಲ್ ರಶೀದ್(3-70)ಏಳು ವಿಕೆಟ್‌ಗಳನ್ನು ಹಂಚಿಕೊಂಡಿದ್ದು, ಇಂಗ್ಲೆಂಡ್ ಇನ್ನೂ 17 ಎಸೆತಗಳು ಬಾಕಿ ಇರುವಾಗಲೇ ಜಯ ಸಾಧಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News