×
Ad

ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Update: 2018-06-18 20:05 IST

ಉಡುಪಿ, ಜೂ.18: ಬೆಂಗಳೂರಿನ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಡಾ.ಜಿ.ಶಂಕರ್ ಮಹಿಳಾ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಇವುಗಳ ಸಂಯುಕ್ತ ಸಹಭಾಗಿತ್ವದಲ್ಲಿ ಜೂ.21ರಂದು ಬೆಳಗ್ಗೆ 6:30ಕ್ಕೆ ಉಡುಪಿ ಅಜ್ಜರಕಾಡಿನ ಒಳಾಂಗಣ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುವುದು.

ಅಧ್ಯಕ್ಷತೆಯನ್ನು ಶಾಸಕ ಕೆ.ರಘುಪತಿ ಭಟ್ ವಹಿಸಲಿದ್ದು,ನಿರಾಲಂಬ ಪೂರ್ಣ ಚಕ್ರಾಸನದಲ್ಲಿ ಗಿನ್ನಿಸ್ ದಾಖಲೆ ಮಾಡಿರುವ ತನುಶ್ರೀ ಪಿತ್ರೋಡಿ ಇವರಿಂದ ಪ್ರಾತ್ಯಕ್ಷಿಕೆಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News