×
Ad

ಜೂ.19ರಂದು ಉಡುಪಿ ಪೊಲೀಸರಿಗೆ ಕಾರ್ಯಾಗಾರ

Update: 2018-06-18 20:07 IST

ಉಡುಪಿ, ಜೂ.18: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ, ಪೊಲೀಸ್ ಇಲಾಖೆ ಹಾಗೂ ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪೊಲೀಸ್ ದೂರು ಪ್ರಾಧಿಕಾರ, ಸಂತ್ರಸ್ತರ ಪರಿಹಾರ ಯೋಜನೆ ಹಾಗೂ ದಿನನಿತ್ಯದ ಕರ್ತವ್ಯದಲ್ಲಿ ಪೊಲೀಸರಿಗೆ ಎದುರಾಗುವ ಸಮಸ್ಯೆಗಳು ಎಂಬ ವಿಷಯಗಳ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಜೂ.19ರಂದು ಬೆಳಗ್ಗೆ 9:45ಕ್ಕೆ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಕಾನ್ಫರೆನ್ಸ್ ಹಾಲ್‌ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕಾ ಟಿ. ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬ. ನಿಂಬರಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News