‘ನೂತನ ಬಜೆಟ್ ಮಂಡನೆ ಅಗತ್ಯವಿಲ್ಲ’

Update: 2018-06-18 17:00 GMT

ಬೆಂಗಳೂರು, ಜೂ.18: ನೂತನ ಸಮ್ಮಿಶ್ರ ಸರಕಾರ ಹೊಸ ಬಜೆಟ್ ಮಂಡಿಸುವ ಬದಲಿಗೆ ಹಿಂದಿನ ಸರಕಾರದ ಬಜೆಟನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ರಾಜ್ಯ ಒಕ್ಕಲಿಗರ ಹೋರಾಟ ಸಮಿತಿ ಆಗ್ರಹಿಸಿದೆ.

ಹಿಂದಿನ ಸರಕಾರದಲ್ಲಿ ಮುಖ್ಯಮಂತ್ರಿ ಹುದ್ದೆ ಜೊತೆಗೆ ಹಣಕಾಸು ಖಾತೆಯನ್ನು ಹೊಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವಾರು ಯೋಜನೆಗಳು ಮತ್ತು ಬಾಗ್ಯಗಳ ಮೂಲಕ ಜನಪರವಾದ ಬಜೆಟ್ ಮಂಡಿಸಿದ್ದರು. ಹೀಗಾಗಿ, ಇಂದಿನ ಸಮ್ಮಿಶ್ರ ಸರಕಾರ ಅದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಸಮಿತಿ ಸಲಹೆ ನೀಡಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೂತನ ಬಜೆಟ್ ಮಂಡಿಸುವ ಬದಲಿಗೆ ರೈತರಿಗೆ ನೆರವಾಗುವಂತಹ ಯೋಜನೆಗಳನ್ನು ಜಾರಿ ಮಾಡಬೇಕು. ಸರಕಾರಿ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣವನ್ನು ನೀಡಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ನುರಿತ ವೈದ್ಯರು ಸೇರಿದಂತೆ ಮೂಲಭೂತ ಸೌಲಭ್ಯಗಳು ಒದಗಿಸುವುದು ಸೇರಿದಂತೆ ಜನಪರ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ಸಮಿತಿ ಅಧ್ಯಕ್ಷ ಜೆ.ಪ್ರಕಾಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News