ಕೆಪಿಎಸ್ಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Update: 2018-06-18 17:02 GMT

ಬೆಂಗಳೂರು, ಜೂ.18: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಗ್ರೂಪ್ ‘ಎ’ ವೃಂದದ ವ್ಯವಸ್ಥಾಪಕ ಐಟಿ 01 ಹುದ್ದೆಗೆ ಸಂಬಂಧಿಸಿದಂತೆ, ಮೂಲ ದಾಖಲಾತಿಗಳ ಪರಿಶೀಲನೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಆಯೋಗದ ಅಂತರ್ಜಾಲ ತಾಣದಲ್ಲಿ ಪ್ರಕಟಿಸಲಾಗಿದೆ.

ಜೂ. 26ರಂದು ಮೂಲ ದಾಖಲೆಗಳ ಪರಿಶೀಲನಾ ಕಾರ್ಯ ನಡೆಯಲಿದೆ. ಅರ್ಹ ಅಭ್ಯರ್ಥಿಗಳಿಗೆ ಸೂಚನಾ ಪತ್ರಗಳನ್ನು ಈಗಾಗಲೇ ಅಂಚೆ ಮೂಲಕ ಕಳುಹಿಸಲಾಗಿದೆ. ಸೂಚನಾ ಪತ್ರ ಸರಿಯಾದ ಸಮಯದಲ್ಲಿ ತಲುಪದಿದ್ದಲ್ಲಿ, ಅಂತರ್ಜಾಲ ತಾಣದಲ್ಲಿ ಅರ್ಹ ಅಭ್ಯರ್ಥಿಗಳ ಪಟ್ಟಿಯ ಪ್ರತಿ ಪಡೆದು ನಿಗದಿತ ದಿನಾಂಕದಂದು ಹಾಜರಾಗಬಹುದಾಗಿದೆ ಎಂದು ಕರ್ನಾಟಕ ಲೋಕೇವಾ ಆಯೋಗದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News