ಮಾನ್ಸೂನ್ ಪ್ರೀಮಿಯರ್ ಲೀಗ್ ಕ್ರಿಕೆಟ್: ನೇತಾಜಿ ಸ್ಪೋರ್ಟ್ಸ್ ಕ್ಲಬ್ಬಿಗೆ ಟ್ರೋಫಿ

Update: 2018-06-18 17:26 GMT

ಉಡುಪಿ, ಜೂ.18: ಫ್ರೆಂಡ್ಸ್ ಕ್ರಿಕೆಟರ್ಸ್‌ ಆಶ್ರಯದಲ್ಲಿ ಪರ್ಕಳ ಪ್ರೌಢ ಶಾಲಾ ಮೈದಾನದಲ್ಲಿ ನಡೆದ ನಿಗದಿತ ಓವರುಗಳ ಮಾನ್ಸೂನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಕೂಟದಲ್ಲಿ ಪರ್ಕಳದ ನೇತಾಜಿ ಸ್ಪೋರ್ಟ್ಸ್ ಕ್ಲಬ್ ತಂಡ ಚಾಂಪಿಯನ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಅಂತಿಮ ಪಂದ್ಯದಲ್ಲಿ ನೇತಾಜಿ ಸ್ಪೋರ್ಟ್ಸ್ ಕ್ಲಬ್, ಪ್ರಬಲ ಎದುರಾಳಿ ಕಾಜಾರಗುತ್ತು ಕ್ರಿಕೆಟರ್ಸ್‌ನ್ನು ಏಳು ವಿಕೆಟ್‌ಗಳ ಅಂತರದಿಂದ ಪರಾಭವ ಗೊಳಿಸಿತು. ಪರ್ಕಳ ತಂಡವು ಲೀಗ್ ಹಂತದ ಆರು ಪಂದ್ಯಗಳು, ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳನ್ನು ಜಯಿಸುವ ಮೂಲಕ ಕೂಟದಲ್ಲಿ ಅಜೇಯ ವಾಗುಳಿಯಿತು.

ಎಲ್ಲಾ ಪಂದ್ಯಗಳಲ್ಲೂ ಉತ್ತಮ ಪ್ರದರ್ಶನ ನೀಡಿದ ನೇತಾಜಿ ತಂಡದ ಗೌತಮ್ ಪಂದ್ಯಶ್ರೇಷ್ಠ, ಪ್ರದೀಪ್ ಉತ್ತಮ ಬೌಲರ್ ಹಾಗೂ ಪ್ರದೀಪ್ ಶೆಟ್ಟಿ ಅತ್ಯುತ್ತಮ ಆಲ್‌ರೌಂಡರ್ ಪ್ರಶಸ್ತಿಯಿಂದ ಗೌರವಿಸಲ್ಪಟ್ಟರು.

 ಉಡುಪಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಬಾಲಕೃಷ್ಣ ಪರ್ಕಳ ವಿಜೇತರಿಗೆ ಬಹುಮಾನ ವಿತರಿಸಿದರು. ನ್ಯಾಯವಾದಿ ಸಚಿನ್ ಮುಖ್ಯ ಅತಿಥಿ ಯಾಗಿದ್ದರು. ಧನಂಜಯ್, ವಿವೇಕ್‌ರಾಜ್, ಕೃಷ್ಣ ಭಟ್ ಮುಂತಾದವರು ಉಪಸ್ಥಿತರಿದ್ದರು. ಹರೀಶ್ ಕಾರ್ಯಕ್ರಮ ನಿರ್ವಹಿಸಿದರು.

ಉಡುಪಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಬಾಲಕೃಷ್ಣ ಪರ್ಕಳ ವಿಜೇತರಿಗೆ ಬಹುಮಾನ ವಿತರಿಸಿದರು. ನ್ಯಾಯವಾದಿ ಸಚಿನ್ ಮುಖ್ಯ ಅತಿಥಿ ಯಾಗಿದ್ದರು. ನಂಜಯ್,ವಿವೇಕ್‌ರಾಜ್,ಕೃಷ್ಣಟ್ ಮುಂತಾದವರು ಉಪಸ್ಥಿತರಿದ್ದರು. ಹರೀಶ್ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News