ಜಮ್ಮು-ಕಾಶ್ಮೀರ: ಮುಖ್ಯಮಂತ್ರಿ ಸ್ಥಾನಕ್ಕೆ ಮೆಹಬೂಬಾ ಮುಫ್ತಿ ರಾಜೀನಾಮೆ

Update: 2018-06-19 10:07 GMT

ಹೊಸದಿಲ್ಲಿ, ಜೂ.19: ಜಮ್ಮು ಕಾಶ್ಮೀರದಲ್ಲಿ ಪಿಡಿಪಿ ಜೊತೆಗಿನ ಮೈತ್ರಿಯನ್ನು ಬಿಜೆಪಿ ಕಡಿದುಕೊಂಡ ನಂತರ ಮೆಹಬೂಬಾ ಮುಫ್ತಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ರಾಜ್ಯಪಾಲ ನಯೀಮ್ ಅಖ್ತರ್ ರಿಗೆ ಸಲ್ಲಿಸಿದ್ದಾರೆ.

“ಜಮ್ಮು ಮತ್ತು ಕಾಶ್ಮೀರದಲ್ಲಿ ಸರಕಾರದೊಂದಿಗಿನ ಮೈತ್ರಿಯನ್ನು ಮುಂದುವರಿಸಲು ಬಿಜೆಪಿಗೆ ಸಾಧ್ಯವಿಲ್ಲ. ಆದ್ದರಿಂದ ಮೈತ್ರಿ ಕಡಿದುಕೊಳ್ಳುತ್ತಿದ್ದೇವೆ” ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಸುದ್ದಿಗೋಷ್ಟಿಯಲ್ಲಿ ಇಂದು ಘೋಷಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News